TSK

TSK · ಯೆಶಾಯ 10:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.

ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.

¶ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.

ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.

ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!

ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ.

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’

“‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?

“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.

¶ “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.

ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.

ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.