TSK

TSK · ಯೆಶಾಯ 10:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.

ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.

ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.

ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.

ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.

ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.

ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ,

¶ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.

ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.

¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›