¶ ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.
TSK
TSK · ಯೆಶಾಯ 10:22
Treasury of Scripture Knowledge references in ಕನ್ನಡ IRV.
¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”
ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.
ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”
ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
¶ ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.