TSK

TSK · ಯೆಶಾಯ 10:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.

ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.

¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.

¶ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.

ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!

ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.

¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

¶ “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.