TSK

TSK · ಯೆಶಾಯ 10:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.

ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.

ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.

ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.

ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.

ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.

ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.

ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!

ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.