TSK

TSK · ಯೆಶಾಯ 11:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.

ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

¶ ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,

ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.

ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.

ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.

ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!

ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.

¶ ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,

¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›

ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

¶ ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.

¶ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.

ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.