ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.
TSK
TSK · ಯೆಶಾಯ 11:14
Treasury of Scripture Knowledge references in ಕನ್ನಡ IRV.
ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.
ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.
ನನ್ನ ಜನರು ಎದೋಮಿನ ಉಳಿದ ಭಾಗವನ್ನು, ಯೆಹೋವನ ಪ್ರಜೆ ಎನ್ನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಿಲ್ಲಿಸಿ ಮೊದಲಿದ್ದಂತೆ ಅದನ್ನು ತಿರುಗಿ ಕಟ್ಟಿಸುವೆನು” ಎಂಬುದಾಗಿ ಯೆಹೋವನು ನುಡಿದಿದ್ದಾನೆ.
¶ ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.
ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.
‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›