TSK

TSK · ಯೆಶಾಯ 12:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.

ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!

¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.

¶ ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.