ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
TSK
TSK · ಯೆಶಾಯ 13:14
Treasury of Scripture Knowledge references in ಕನ್ನಡ IRV.
1 ಅರಸುಗಳು 22:17
TSK
ಯೆಶಾಯ 17:13
TSK
ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
ಯೆರೆಮಿಯ 50:16
TSK
ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
ಪ್ರಕಟನೆ 18:9
TSK
¶ “ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.