TSK

TSK · ಯೆಶಾಯ 13:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.

ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.

ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.

¶ ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.