TSK

TSK · ಯೆಶಾಯ 13:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.

ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.

ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.

ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.

“ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.

ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”

ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.

¶ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.