ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, ಅವನ ತಲೆಯು ಮೋಡಗಳಿಗೆ ತಗುಲಿದರೂ,
TSK
TSK · ಯೆಶಾಯ 14:13
Treasury of Scripture Knowledge references in ಕನ್ನಡ IRV.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
‘ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ತೂರೇ, ‘ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ’ ಎಂದು ನೀನು ಅಂದುಕೊಂಡಿದ್ದೀ!
ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.
¶ “‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.
“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.
ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.
ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.