TSK

TSK · ಯೆಶಾಯ 14:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು.

ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,

ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”

ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.

ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.