¶ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.
TSK
TSK · ಯೆಶಾಯ 15:4
Treasury of Scripture Knowledge references in ಕನ್ನಡ IRV.
ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.
ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?
ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.
ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?
ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.
ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.