TSK

TSK · ಯೆಶಾಯ 16:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು.

ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.

ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.

ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.

ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.