TSK

TSK · ಯೆಶಾಯ 16:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

¶ ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.

ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.

ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.

ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.

ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.

ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.

ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”