TSK

TSK · ಯೆಶಾಯ 16:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.

ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.

ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.