ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
TSK
TSK · ಯೆಶಾಯ 17:10
Treasury of Scripture Knowledge references in ಕನ್ನಡ IRV.
ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.
ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.
ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.
ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.
ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”
ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.
ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.
ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.
ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.