TSK

TSK · ಯೆಶಾಯ 17:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.

¶ ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.

ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,

ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.

ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.

¶ “ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.

“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.

ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.

ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.

ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.