TSK

TSK · ಯೆಶಾಯ 19:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.

ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.