ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
TSK
TSK · ಯೆಶಾಯ 19:13
Treasury of Scripture Knowledge references in ಕನ್ನಡ IRV.
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
¶ ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.
ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.
ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.
ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”