TSK

TSK · ಯೆಶಾಯ 19:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.

ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.

ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”

“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;

ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.

ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.

ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.

ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.