¶ ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.
TSK
TSK · ಯೆಶಾಯ 2:10
Treasury of Scripture Knowledge references in ಕನ್ನಡ IRV.
ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.
ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
¶ ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.
ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
‹ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.›
ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.