TSK

TSK · ಯೆಶಾಯ 20:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.

ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.

ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.

ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.

ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.

¶ ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.