TSK

TSK · ಯೆಶಾಯ 22:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.

ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.

¶ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,

ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.

ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.

¶ “ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.

ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.