TSK

TSK · ಯೆಶಾಯ 23:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.

ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.

¶ ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.

¶ ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.

¶ ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.

ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.

¶ “ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.