ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.
TSK
TSK · ಯೆಶಾಯ 23:9
Treasury of Scripture Knowledge references in ಕನ್ನಡ IRV.
ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
¶ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
¶ ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.