ಯಾಜಕಕಾಂಡ 26:21
TSK
¶ “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
TSK
Treasury of Scripture Knowledge references in ಕನ್ನಡ IRV.
¶ “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”
ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.