TSK

TSK · ಯೆಶಾಯ 26:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.

ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.

ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.

ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.

‹ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು”› ಎಂದು ಹೇಳಿದನು.

ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?