TSK

TSK · ಯೆಶಾಯ 26:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.

ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.

ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.

ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.

ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.

¶ ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು.

ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.

ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.