¶ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
TSK
TSK · ಯೆಶಾಯ 26:20
Treasury of Scripture Knowledge references in ಕನ್ನಡ IRV.
ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.
ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.
ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
¶ “ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’
¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›