¶ ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
TSK
TSK · ಯೆಶಾಯ 26:21
Treasury of Scripture Knowledge references in ಕನ್ನಡ IRV.
ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!
¶ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,
¶ ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
¶ ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.
¶ “ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.
‹ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.›
ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
¶ ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.
¶ “ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.