TSK

TSK · ಯೆಶಾಯ 26:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.

ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.

ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.

ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.

ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.