TSK

TSK · ಯೆಶಾಯ 28:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.

¶ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.

ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.

ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.

“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.