TSK

TSK · ಯೆಶಾಯ 28:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,

ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”

ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.

ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.

¶ ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.

ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’

ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.

¶ “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.

ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.