¶ ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.
TSK
TSK · ಯೆಶಾಯ 28:19
Treasury of Scripture Knowledge references in ಕನ್ನಡ IRV.
¶ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.
ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.
¶ ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
¶ ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.
ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.
ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.