ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
TSK
TSK · ಯೆಶಾಯ 28:2
Treasury of Scripture Knowledge references in ಕನ್ನಡ IRV.
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.
ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.
ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.