TSK

TSK · ಯೆಶಾಯ 28:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.

ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.

ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.

ಅಷ್ಟರಲ್ಲಿ ಬಾಳ್ ಪೆರಾಚೀಮಿಗೆ ಬಂದ ಅವರನ್ನು ದಾವೀದನು ಸೋಲಿಸಿ, “ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ಹೇಳಿದ್ದರಿಂದ ಆ ಯುದ್ಧ ಸ್ಥಳಕ್ಕೆ ಬಾಳ್ ಪೆರಾಚೀಮ್ ಎಂದು ಹೆಸರಾಯಿತು.

¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.

ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!

ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.

¶ ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.

¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,