TSK

TSK · ಯೆಶಾಯ 29:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.

ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.

ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.

¶ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.

ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.

ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.

¶ “ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.

¶ ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.