ದಾನಿಯೇಲನು 12:4
TSK
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
TSK
Treasury of Scripture Knowledge references in ಕನ್ನಡ IRV.
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›
ಅದಕ್ಕೆ ಯೇಸು, ‹“ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.›
¶ ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು.