TSK

TSK · ಯೆಶಾಯ 29:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.

¶ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.

ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.

‹ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು”› ಅಂದನು.