“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”
TSK
TSK · ಯೆಶಾಯ 29:6
Treasury of Scripture Knowledge references in ಕನ್ನಡ IRV.
ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.
ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.
ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.
‹ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.›
ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.
ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.