TSK

TSK · ಯೆಶಾಯ 3:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.

ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.

ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,

ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?

ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.

“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ

ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.

¶ ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.

ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.

ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.

¶ “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?

ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?