TSK

TSK · ಯೆಶಾಯ 30:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.

ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.

ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.

ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸವಿಮಾತನಾಡೀತೇ?

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.

ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.

ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?

ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.

“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.

‹ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.›

ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.