ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.
TSK
TSK · ಯೆಶಾಯ 30:13
Treasury of Scripture Knowledge references in ಕನ್ನಡ IRV.
ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.
‹ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”›