ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
TSK
TSK · ಯೆಶಾಯ 30:22
Treasury of Scripture Knowledge references in ಕನ್ನಡ IRV.
ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,
¶ ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”
¶ ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.