¶ “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
TSK
TSK · ಯೆಶಾಯ 30:27
Treasury of Scripture Knowledge references in ಕನ್ನಡ IRV.
ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?
ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.
ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.
ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.
¶ “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.
ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.
ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.