TSK

TSK · ಯೆಶಾಯ 30:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.

¶ “ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.

ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.

ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.

ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.

ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು!

¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,