ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.
TSK
TSK · ಯೆಶಾಯ 32:6
Treasury of Scripture Knowledge references in ಕನ್ನಡ IRV.
ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ.
ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
(ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
¶ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.
ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.