TSK

TSK · ಯೆಶಾಯ 32:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ

ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.

ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.

ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”

ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!

‹ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”› ಅಂದನು.